Breaking News

ಪಿಎಸಿಎಲ್‌ ಹಗರಣ : ಇನ್‌ಸ್ಪೆಕ್ಟರ್ ಬಿ.ಕೆ.ಕಿಶೋರ್‌ ಕುಮಾರ್‌ ಅಮಾನತು

Spread the love

ಆನೇಕಲ್ : ಪಿಎಸಿಎಲ್‌ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಭೂಮಾರಾಟದ ತನಿಖೆ ನಡೆಯುತ್ತಿದ್ದು ಆಂತರಿಕ ಭದ್ರತಾ ವಿಭಾಗದ ಇನ್‌ಸ್ಪೆಕ್ಟರ್‌ ಬಿ.ಕೆ.ಕಿಶೋರ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

 

ಅಮಾನತು ಆದೇಶವನ್ನು ಇವರ ಕುಟುಂಬಕ್ಕೆ ತಲುಪಿಸಲಾಗಿದೆ ಎನ್ನಲಾಗಿದೆ. ಪರ್ಲ್ಸ್‌ ಆಗ್ರೊಟೆಕ್‌ ಕಾರ್ಪೊರೇಷನ್‌ ಲಿಮಿಟೆಟ್ ಕಂಪನಿಗೆ ಸೇರಿದ ಆನೇಕಲ್‌ ತಾಲ್ಲೂಕಿನ ಎಂ.ಮೇಡಹಳ್ಳಿಯ 12.30 ಎಕರೆ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಾರಾಟ ಮಾಡಲಾಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ವಕೀಲ ಮಂಜುನಾಥ್‌, ರಿಯಲ್‌ ಎಸ್ಟೇಟ್ ಏಜೆಂಟ್‌ ಚಂದ್ರಮೋಹನ್‌ ಮತ್ತು ಪೃಥ್ವಿನ್‌ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಬಿ.ಕೆ.ಕಿಶೋರ್‌ ಕುಮಾರ್‌ ಅವರ ಸಹೋದರ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆನೇಕಲ್ ಉಪ ವಿಭಾಗದ ಡಿವೈಎಸ್ಪಿ ಲಕ್ಷ್ಮೀನಾರಾಯಣ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ