ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಮಂಗಳವಾರ ಪೊಲೀಸರು ಮತ್ತೆ ಇಬ್ಬರು ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಮವಾರ 20 ಮಂದಿಗೆ ಜಾಮೀನು ಕೂಡ ಸಿಕ್ಕಿದೆ.
ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತರು.
ನಾಗಪ್ಪ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್ ಉಪಕರಣ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಯಲ್ಲಪ್ಪ ಈ ಆರೋಪಿಗೆ ಉಪಕರಣ ನೀಡಿದ್ದ. ಅಲ್ಲದೇ, ಶಿರಹಟ್ಟಿಯ ತೋಟದ ಮನೆಯೊಂದರಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರಗಳನ್ನು ರವಾನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಕಾಕ ಶಹರ ಠಾಣೆಯಲ್ಲಿ ಈ ಸಂಬಂಧ ಐಪಿಸಿ ಸೆಕ್ಷನ್ 96/2022 ಕಲಂ 120(ಬಿ), 411, 417, 420, 426, 406, 511, 116, 201 ಹಾಗೂ ಸಹ ಕಲಂ 34 ಅಡಿ ಪ್ರಕರಣ ದಾಖಲಿಸಲಾಗಿದೆ.
Laxmi News 24×7