Breaking News
Home / ಜಿಲ್ಲೆ / ಬೆಳಗಾವಿ / ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ

ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ

Spread the love

ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯ ಕಳಪೆ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಹೌದು ಬೆಳಗಾವಿ-ಖಾನಾಪುರ ರಸ್ತೆ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯನ್ನು ಕಳೆದ ವಾರವಷ್ಟೇ ಸಂಸದೆ ಮಂಗಲಾ ಅಂಗಡಿ ಅವರು ನಗರ ಶಾಸಕರು, ರೈಲ್ವೇ ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದ್ದರು. ಈ ಮೇಲ್ಸೇತುವೆ ಉದ್ಘಾಟನೆಗೊಂಡ ಕೇವಲ 24 ಗಂಟೆಯಲ್ಲಿಯೇ ರಸ್ತೆಯಲ್ಲಿ ತೆಗ್ಗು ಬಿದ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಳಪೆ ಕಾಮಗಾರಿ ಖಂಡಿಸಿ ಬುಧವಾರ ಈ ಮೇಲ್ಸೇತುವೆ ಮೇಲೆ ರಸ್ತೆ ತಡೆದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಳಪೆ ಕಾಮಗಾರಿಯ ಫೋಟೊಗಳನ್ನು ಹಿಡಿದು, ನಕಲಿ ನೋಟುಗಳನ್ನು ರಸ್ತೆಯಲ್ಲಿ ತೂರಿ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ: ನಾಲ್ಕು ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

Spread the love ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳ 28 ಸದಸ್ಯ ಸ್ಥಾನಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ