Breaking News

ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ

Spread the love

ಬೆಂಗಳೂರು : 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ.

 

ಈ ಕುರಿತು ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್ ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ. ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಪುನರಾವರ್ತಿ ಅಭ್ಯರ್ಥಿಗಳಿಗೆ ಈ ಕಛೇರಿ ಅಧಿಸೂಚನೆ ದಿನಾಂಕ 17:09:2022 ರ ಪುಟ ಸಂಖ್ಯೆ 29 ರಲ್ಲಿ ವಿವರಣೆ ನೀಡಿರುವಂತೆ ತಾಂತ್ರಿಕ ವಿಷಯ ಆಯ್ಕೆ ಮಾಡಿಕೊಳ್ಳತಕ್ಕದ್ದು ಎಂದು ಸೂಚನೆ ನೀಡಿದ್ದಾರೆ.

ಮುಂದುವರೆದು 2022-23 ನೇ ಸಾಲಿನ 10 ನೇ ತರಗತಿಯಲ್ಲಿ ಜೆಟಿಎಸ್ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಶಾಲಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಇಲಾಖೆಯಲ್ಲಿ ಅಭಿವೃದ್ದಿಪಡಿಸಿರುವ ಪರಿಷ್ಕೃತ ಪಠ್ಯ ಕ್ರಮವನ್ನು ಆಧರಿಸಿ ಪರೀಕ್ಷೆ ನಡೆಸಲಾಗುತ್ತದೆ ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ