Breaking News

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

Spread the love

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ ಚುನಾವಣೆಗೆ ಹೋಗುವುದಿಲ್ಲ ಎಂದು ಹೇಳಿಲ್ಲ. ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಇನ್ನು ಪ್ರಭಾಕರ್ ಭಟ್ ಹೇಳಿಕೆ ಅವರ ವೈಯಕ್ತಿಕ. ಆದರೆ ಸಿಎಂ ಬಿಎಸ್‍ವೈ ನಮ್ಮ ಬಳಿಯಾಗಲಿ, ಎಲ್ಲಿಯೇ ಆಗಲಿ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಪಡೆಯುತ್ತೇನೆ ಎಂದಿಲ್ಲ. ಈ ಹಿಂದೆ ಹಲವಾರು ಸಭೆಯಲ್ಲಿ 150 ಸೀಟ್ ಗೆಲ್ಲಿಸಿ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದ್ದಾರೆ. ನಾವೆಲ್ಲರೂ ಸಿಎಂ ನಾಯಕತ್ವವನ್ನು ಒಪ್ಪಿಕೊಂಡಿದ್ದೇವೆ ಎಂದರು.

ಸಿಎಂ ವಿದೇಶ ಪ್ರವಾಸದಿಂದ ವಾಪಸ್ ಆದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಇನ್ನು ಡಿಸಿಎಂ ಬದಲಾವಣೆ ವಿಚಾರವಾಗಿ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅದು ವರಿಷ್ಠರಿಗೆ ಬಿಟ್ಟದ್ದು ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ