ಮೈಸೂರು : ”ಅವರು ಕರೆದಾಕ್ಷಣ ಹೋಗಲಾಗುವುದಿಲ್ಲ,ಉತ್ತಮರು ಕರೆದರೇ ಹೋಗಬಹುದು, ದೆವ್ವ ಕರೆದರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ?” ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರನ್ನು ಆಣೆ ಪ್ರಮಾಣ ಮಾಡಲು ಬರುವಂತೆ ಸುಮಲತಾ ಅವರು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಸುಮಲತಾ ಜತೆಯಲ್ಲಿರುವವರು ಭ್ರಷ್ಟಾತಿಭ್ರಷ್ಟರು.ಮೈಸೂರು ಬೆಂಗಳೂರು ಹೈವೇ ಕಾಮಗಾರಿಯಲ್ಲಿ ನೂರಾರು ಕೋಟಿ ಅಕ್ರಮ ನಡೆದಿದೆ.ಆ ಅಕ್ರಮಗಳಲ್ಲಿ ಸುಮಲತಾ ಬೆಂಬಲಿಗರು ಭಾಗಿಯಾಗಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.
”ಸುಮಲತಾ ಏಟ್ರಿಯಾ ಹೋಟೆಲ್ ಗೆ ಏಕೆ ಹೋಗಿದ್ದರು? ಹೋಟೆಲ್ ನಲ್ಲಿ ಕುಳಿತು ಅವರು ಏನು ಮಾಡಿದರು ಎಂಬುದರ ವಿಡಿಯೋ ದಾಖಲೆಗಳಿವೆ. ಸೂಕ್ತ ಸಂದರ್ಭದಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸುಮಲತಾ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.ಮುಂಬರುವ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದುಕಿಡಿ ಕಾರಿದರು.
Laxmi News 24×7