Breaking News

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

Spread the love

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ ನಿಜಕ್ಕೂ ಪ್ರಶಂಸನೀಯ. ಈ ಸಂಬಂಧ ಕಳೆದ ಅನೇಕ ವರ್ಷಗಳಿಂದ ತಮ್ಮ ಬೇಡಿಕೆಯ ಇಡೇರಿಕೆಗಾಗಿ ಹೋರಾಟ ನಡೆಸುತ್ತ ತಿಳಿಸುತ್ತ ಬಂದಿದ್ದಾರೆ. ಅಲ್ಲದೇ ಕೂಡಲಸಂಗಮದಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಮೇಲೆ ಹಕ್ಕೊತ್ತಾಯವನ್ನು ಮಂಡಿಸಿದ್ದಾರೆ. ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ನೀಡಬೇಕೆನ್ನುವುದು ನನ್ನದು ಕೂಡ ಕಳಕಳಿಯ ಮನವಿಯಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ ಸಮಾಜಕ್ಕೆ ಅಗತ್ಯವಿರುವ ಮೀಸಲಾತಿಗಾಗಿ ನಾನು ಕೂಡ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ಪಂಚಮಸಾಲಿ ಸಮಾಜ ಮೂಲ ಬಂಡವಾಳವೇ ಒಕ್ಕಲುತನವಾಗಿದೆ. ಈ ಸಮಾಜ ಬಾಂಧವರು ಸರಳ ಮತ್ತು ಸ್ವಾಭಿಮಾನಿಗಳು. ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ಸಮಾಜದವರು ಮಾಡುತ್ತಿರುವ ಹೋರಾಟವನ್ನು ನಾವೆಲ್ಲರೂ ಬೆಂಬಲಿಸೋಣ. ಜಯ ಮೃತ್ಯುಂಜಯ ಸ್ವಾಮಿಗಳ ಹೆಗಲಿಗೆ ಹೆಗಲು ಕೊಟ್ಟು ಒಗ್ಗಟ್ಟಾಗಿ ಹೋರಾಡೋಣ. ಸಮಾಜದ ಒಳತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೂಡಲ ಸಂಗಮ ಸ್ವಾಮಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದರು.

 


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ