Breaking News

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋಲ್ಲ: ಎಸ್‍ಪಿ ಡಾ.ಸಂಜೀವ್ ಪಾಟೀಲ್

Spread the love

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋದಿಲ್ಲ. ನಾನು ಕೂಡ ದಲಿತ ಕೇರಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತೇನೆ ಎಂದು ಎಸ್‍ಪಿ ಡಾ.ಸಂಜೀವ್ ಪಾಟೀಲ್ ಭರವಸೆ ನೀಡಿದರು.

ಗುರುವಾರ ಬೆಳಗಾವಿಯ ಎಸ್‍ಪಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ದಲಿತ ಮುಖಂಡರ ಜೊತೆಗೆ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಸಭೆ ನಡೆಸಿದರು.

ಈ ವೇಳೆ ದಲಿತ ಮುಖಂಡರು ತಮ್ಮ ವಿವಿಧ ಸಮಸ್ಯೆಗಳ ಬಗ್ಗೆ ಎಸ್‍ಪಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರು ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎರಡು ಗ್ರಾಮಗಳ ನಡುವೆ ಒಂದು ನಾಲಾ ಇದೆ. ಈವರೆಗೂ ಅಲ್ಲಿ ರಸ್ತೆ ಆಗಿಲ್ಲ

 

40 ದಲಿತ ಕುಟುಂಬಗಳಿದ್ದು, 25 ದಲಿತ ವಿದ್ಯಾರ್ಥಿಗಳು ಪಕ್ಕದ ಅಸೋಟಿ ಗ್ರಾಮದ ಶಾಲೆಗೆ ಹೋಗಬೇಕು. ಮಳೆಯಾದ್ರೆ ಹಳ್ಳ ತುಂಬಿ ಹರಿಯುತ್ತದೆ. ಇದರಿಂದ ಶಾಲೆಗೆ ಹೋಗಲು ಮಕ್ಕಳಿಗೆ ಸಾಧ್ಯವಾಗುತ್ತಿಲ್ಲ ಈ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು. ಅದೇ ರೀತಿ ಇನ್ನೊರ್ವ ದಲಿತ ಮುಖಂಡ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ನಮಗೆ ಬೇಡ, ಪೊಲೀಸರ ನಡೆ ದಲಿತರ ಕೇರಿ ಕಡೆ ಎಂಬ ಕಾರ್ಯಕ್ರಮ ಆರಂಭಿಸಬೇಕು.

ಪೊಲೀಸರು ನಮ್ಮ ಪ್ರದೇಶಗಳಿಗೆ ಬಂದು ನಮ್ಮ ಸಮಸ್ಯೆ ಆಲಿಸಬೇಕು ಎಂದು ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ