Breaking News

ನ. 1ರಂದು ಪುನೀತ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರದಾನ:C.M. ಬೊಮ್ಮಾಯಿ

Spread the love

ಬೆಂಗಳೂರು: ‘ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ನ. 1ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಬಗ್ಗೆ ಪುನೀತ್ ರಾಜ್‌ಕುಮಾರ್ ಕುಟುಂಬದ ಸದಸ್ಯರು ಮತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಗುರುವಾರ ಚರ್ಚಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದರು.

 

‘ಈವರೆಗೆ ಎಂಟು ಜನರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿದೆ. 2009ರ ನಂತರ ಮೊದಲ ಬಾರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕನ್ನಡ ಚಿತ್ರರಂಗ, ಭಾಷೆ, ಸಂಸ್ಕೃತಿಗೆ ಪುನೀತ್ ರಾಜ್‌ಕುಮಾರ್ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ದೊಡ್ಡ ಸಾಧನೆ ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿರುವ ಪುನೀತ್, ನಿಜವಾದ ಕರ್ನಾಟಕ ರತ್ನ. ಅವರು ಯುವಜನರಿಗೆ ಸದಾಕಾಲ ಪ್ರೇರಣೆ ಆಗಿರಬೇಕು ಎಂಬ ಮಹದಾಸೆಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಣ್ಣಿಸಿದರು.

ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂಬ ಅಭಿಮಾನಿಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನ. 1ರ ಬಳಿಕ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮೂರು ಕಾರ್ಯಕ್ರಮಗಳನ್ನು ಸುಮಾರು 10 ದಿನ ಆಯೋಜಿಸಲು ತೀರ್ಮಾನಿಸಲಾಗಿದೆ’ ಎಂದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ