Breaking News

ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ | ಸಚಿವ ಸಂಪುಟ ತೀರ್ಮಾನ

Spread the love

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪಂಗಡಗಳ (ಎಸ್‌.ಟಿ) ಮೀಸಲಾತಿ ಪ್ರಮಾಣವನ್ನು ಶೇ 6 ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅಂಕಿತಕ್ಕಾಗಿ ಶುಕ್ರವಾರ ಕಳುಹಿಸಲಾಗುವುದು.

ಅವರ ಒಪ್ಪಿಗೆ ಸಿಕ್ಕಿದ ಬಳಿಕ ಕಾನೂನು ಜಾರಿ ಆಗಲಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

‘ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪಟ್ಟಿಗೆ ಹೆಚ್ಚಿನ ಜಾತಿಗಳು ಸೇರಿವೆ. ಮೊದಲಿಗೆ ಪರಿಶಿಷ್ಟ ಜಾತಿಯಲ್ಲಿ 6 ಜಾತಿಗಳು ಇದ್ದವು. ಈಗ ಅದು 103 ಕ್ಕೆ ಹೆಚ್ಚಿದೆ. ಪರಿಶಿಷ್ಟ ಪಂಗಡದಲ್ಲಿ 2 ರಿಂದ 3 ಜಾತಿಗಳು ಇದ್ದವು, ಈಗ 56 ಜಾತಿಗಳಿವೆ. ಮೀಸಲಾತಿ ಹೆಚ್ಚಳಕ್ಕೆ ಇದನ್ನೇ ಸಮರ್ಥನೆಯನ್ನಾಗಿ ಬಳಸಿಕೊಳ್ಳಲಾಗುವುದು. ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯ ನೀಡಬೇಕಾಗುತ್ತದೆ. ಇದಕ್ಕಾಗಿ ಮೀಸಲಾತಿ ಹೆಚ್ಚಿಸುವುದು ಅನಿವಾರ್ಯ ಎಂಬುದನ್ನು ಹೇಳಬೇಕಾಗುತ್ತದೆ’ ಎಂದು ಅವರು ಹೇಳಿದರು.

‘ಸಂವಿಧಾನದ ಒಂಬತ್ತನೇ ಪರಿಚ್ಛೇದ ಅಡಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದನ್ನು ಕೇಳುವುದಕ್ಕೂ ಮೊದಲು ಇತರ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಪರಿಗಣಿಸಬೇಕಾಗುತ್ತದೆ. ಮೊದಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಉಳಿದದ್ದು ಬಳಿಕ ನೋಡೋಣ ಎಂಬ ತೀರ್ಮಾನಕ್ಕೆ ಬರಲಾಯಿತು’ ಎಂದು ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ