ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹೌದು ಪ್ರತಿ ಟನ್ ಕಬ್ಬಿಗೆ 5500 ರುಪಾಯಿ ದರ ನೀಡುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕರೆ ನೀಡಿತ್ತು. ಹೀಗಾಗಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆ ಬೆಳಗಾವಿ ನಗರ ಪ್ರವೇಶಿಸದಂತೆ ರೈತರನ್ನು ಪೆÇಲೀಸರು ತಡೆಹಿಡಿದಿದ್ದಾರೆ.
ಹತ್ತರಗಿ, ಹಿರೇಬಾಗೇವಾಡಿ ಟೋಲ್‍ನಲ್ಲಿ ರೈತರನ್ನು ಪೆÇಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ರೈತ ಹೋರಾಟಗಾರರ ಮಧ್ಯ ತೀವ್ರ ವಾಗ್ವಾದ ನಡೆಯಿತು.
ಜಿಲ್ಲೆಯ ವಿವಿಧ ಕಡೆಯಿಂದ ಬೆಳಗಾವಿಗೆ ಬರುತ್ತಿದ್ದ ರೈತರನ್ನ ಪೊಲೀಸರು ತಡೆ ಹಿಡಿದಿದ್ದಾರೆ. ಇನ್ನು ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆ ಸುವರ್ಣ ವಿಧಾನಸೌಧದ ಮುಂದೆ ಬೀಗಿ ಪೊಲೀಸ ಬಂದೋಬಸ್ತ್ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯೇ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ನೀಡುವಂತೆ ಆಗ್ರಹಿಸಿ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.