Breaking News

ಬೆಳಗಾವಿಯಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ: ಪ್ರಾಣವನ್ನು ಕಳೆದುಕೊಂಡ ವೀರ ಪೊಲೀಸರಿಗೆ ಇಂದು ಗೌರವ ಸಲ್ಲಿಸುವ ದಿನ

Spread the love

ದೇಶದ ಗಡಿಯಲ್ಲಿ ನಿಂತ ಒಬ್ಬ ಯೋಧ ನಮ್ಮನ್ನ ಶತ್ರುಗಳಿಂದ ಕಾಪಾಡಿದರೆ, ದೇಶದ ಒಳಗಡೆ ಎಲ್ಲ ಹಂತದಲ್ಲೂ ನಮಗೆ ರಕ್ಷಣೆ ನೀಡುವುದು “ಪೊಲೀಸ್” ನಮ್ಮ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡ ವೀರ ಪೊಲೀಸರಿಗೆ ಇಂದು ಗೌರವ ಸಲ್ಲಿಸುವ ದಿನವೇ ಅಕ್ಟೋಬರ್ 21.

ಹೌದು 1959ರ ಅ. 21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೆÇೀಸ್ಟ್ ಹತ್ತಿರ ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ನೇತೃತ್ವದಲ್ಲಿ ಪೆÇಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರ್ರಗಳನ್ನು ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಲಾಗುತ್ತದೆ. ಆ ಸಂದರ್ಭದಲ್ಲಿವೈರಿಗಳ ದಾಳಿಗೆ ವಿಚಲಿತರಾಗದೆ ತಮ್ಮ ಪ್ರಾಣದ ಹಂಗು ತೊರೆದು ಕೊನೆಯುಸಿರಿನವರೆಗೂ ಧೈರ್ಯದಿಂದ ಹೋರಾಡಿ ಪ್ರಾಣ ತೆತ್ತ 10 ಭಾರತೀಯ ಪೆÇಲೀಸ್ ಯೋಧರ ಬಲಿದಾನದ ಸ್ಮರಣೆ ಪ್ರತೀಕವಾಗಿ ಪ್ರತಿ ವರ್ಷ ಅ.21ರಂದು ದೇಶಾದ್ಯಂತ ಎಲ್ಲಾ ಜಿಲ್ಲಾ ಪೆÇಲೀಸ್ ಕೇಂದ್ರ ಸ್ಥಾನಗಳಲ್ಲಿ ಪೆÇಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತದೆ.

ಅದೇ ರೀತಿ ಶುಕ್ರವಾರ ಬೆಳಗಾವಿಯ ಜಿಲ್ಲಾ ಪೆÇಲೀಸ್ ಮೈದಾನದಲ್ಲಿ ಪೆÇಲೀಸ್ ಹುತಾತ್ಮ ದಿನ ಆಚರಿಸಲಾಯಿತು. ಈ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾದೀಶರಾದ ಮುಸ್ತಾಪ್ ಹುಸೇನ್ ಸಯೈದ್ ಅಜೀಜ್, ಐಜಿಪಿ ಸತೀಶ್ ಕುಮಾರ್, ನಗರ ಪೆÇಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಎಸ್ಪಿ ಡಾ.ಸಂಜೀವ್ ಪಾಟೀಲ್, ನಿವೃತ್ತ ಡಿಜಿಪಿ ಭಾಸ್ಕರ್ ರಾವ್ ಸೇರಿ ಡಿಸಿಪಿ, ಎಸಿಪಿ, ಪಿಎಸ್ಐ ಹಾಗೂ ನಿವೃತ್ತ ಪೆÇಲೀಸ್ ಅಧಿಕಾರಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪಚಕ್ರ ಸಲ್ಲಿಸಿ ನಮನ ಸಲ್ಲಿಸಿದರು. ಇದೇ ವೇಳೆ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮ ಪೆÇಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ