ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.
ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
Laxmi News 24×7