Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ: ದೀಪಾವಳಿ ಬಟ್ಟೆ ಖರೀದಿಗೆ ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ

ಬೆಳಗಾವಿ: ದೀಪಾವಳಿ ಬಟ್ಟೆ ಖರೀದಿಗೆ ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ

Spread the love

ಬೆಳಗಾವಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.

 

ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬೇಲಿ(5) ಎಂಬ ಬಾಲಕ ಮೃತಪಟ್ಟಿದೆ. ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಾಲಕನ ಕುತ್ತಿಗೆಗೆ ಮಾಂಜಾ ದಾರ ಬಿಗಿದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಗುವನ್ನು ಬದುಕಿಸಲು ತಂದೆ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ದ್ವಿಚಕ್ರ ವಾಹನದ ಮೇಲೆ ತಂದೆ ಈರಣ್ಣ ಅವರೊಂದಿಗೆ ವರ್ಧನ ಬೆಳಗಾವಿಗೆ ಬಟ್ಟೆ ಖರೀದಿಗೆ ಬಂದಿದ್ದನು. ನಗರದಲ್ಲಿ ಬಟ್ಟೆ ಖರೀದಿಸಿ ಬೆಳಗಾವಿಯಿಂದ ತಮ್ಮೂರಿಗೆ ಹೊರಟಿದ್ದರು. ದ್ವಿಚಕ್ರ ವಾಹನದಲ್ಲಿ ಮುಂಭಾಗದಲ್ಲಿ ವರ್ಧನ ಕುಳಿತುಕೊಂಡಿದ್ದ. ಕಣ್ಣಿಗೆ ಕಾಣಿಸದ ಮಾಂಜಾ ದಾರ ನೇರವಾಗಿ ವರ್ಧನ ಕುತ್ತಿಗೆಗೆ ಬಿಗಿದು ಸ್ಥಳದಲ್ಲಿಯೇ ಅಸುನೀಗಿದ್ದಾನೆ.

ಮಾಂಜಾ ದಾರವನ್ನು ನಿಷೇಧ ಮಾಡಿದ್ದರೂ ಇದನ್ನು ಕಾಳಸಂತೆಯಲ್ಲಿ ಮಾರಾಟ ನಡೆದಿದ್ದು, ಈಗ ಬಾಲಕನನ್ನು ಬಲಿ ಪಡೆದಿದೆ. ಮಾಂಜಾ ಸಂಪೂರ್ಣ ನಿಷೇಧಿಸಲು ಜಿಲ್ಲಾಡಳಿತ ಹಾಗೂ ಪೊಲೀಸರು ಅಗತ್ಯ ಕ್ರಮ ಜರುಗಿಸಬೇಕು ಎಂದು ಬಾಲಕನ ಸಂಬಂಧಿಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Spread the love ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ