Breaking News

ಹಳಿ ತಪ್ಪಿದ ಗೂಡ್ಸ್ ರೈಲಿನಿಂದ ಭಾರೀ ಅನಾಹುತ ತಪ್ಪಿದೆ.

Spread the love

ಹಳಿ ತಪ್ಪಿದ ಗೂಡ್ಸ್ ರೈಲಿನಿಂದ ಭಾರೀ ಅನಾಹುತ ತಪ್ಪಿದೆ. ರೈಲ್ವೆ ಗೂಡ್ಸ್‌ ಬೋಗಿಗಳು ಕಟ್ ಆದ ಪರಿಣಾನ ಆರು ಬೋಗಿಗಳು ಉರುಳಿಬಿದ್ದಿವೆ. ಚಲಿಸುತ್ತಿದ್ದ ವೇಳೆ ಏಕಾಏಕಿ ರೈಲ್ವೆಯ ಆರು ಬೋಗಿಗಳು ಕಟ್ ಆಗಿದ್ದು ಅದೃಷ್ಠ ವಶಾತ್ ಹೆಚ್ಚಿನ ಹಾನಿಯಾಗಿಲ್ಲ, ಯಾವುದೇ ಪ್ರಾಣ ಹಾನಿಯಾಗಿಲ್ಲ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡ ರೈಲು ‌ನಿಲ್ದಾಣ ಬಳಿ ಘಟನೆ ನಡೆದಿದ್ದು ಆರು ಬೋಗಿಗಳು ಟ್ರ್ಯಾಕ್ ನಿಂದ ಕಟ್‌ ಆಗಿ ಹೊರಗಡೆಗೆ ಬಿದ್ದಿವೆ. ವಿಜಯಪುರ ರೈಲ್ವೆ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ರೈಲು ಬೋಗಿಗಳು ಉರುಳಿಬಿದ್ದ ಹಿನ್ನೆಲ೬ ಸೊಲ್ಲಾಪುರ ಹಾಗೂ ವಿಜಯಪುರ ಮಾರ್ಗದಿಂದ ಹುಬ್ಬಳ್ಳಿ ಮಾರ್ಗಕ್ಕೆ ಹೋಗಬೇಕಿದ್ದ ಆರು ರೈಲುಗಳ ಸಂಚಾರ ಕ್ಯಾನ್ಸಲ್ ಮಾಡಲಾಗಿದೆ. ರೇಲ್ವೆ ಇಲಾಖೆ ಅಧಿಕಾರಿಗಳಿಂದ ಇಂದು ಸಂಚರಿಸಬೇಕಿದ್ದ ಆರು ರೈಲು ಕ್ಯಾನ್ಸಲ್ ಮಾಡಿರುವ ಕುರಿತು ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ