Breaking News
Home / ರಾಜಕೀಯ / ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಕೌಂಟರ್ ನೀಡಲು ಪ್ರತ್ಯೇಕ ಎಸ್​ಟಿ ಸಮಾವೇಶ ನಡೆಸಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಟಿ ಸಮಾವೇಶ ಆಯೋಜನೆಗೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿದ್ದು, ಆ ಮೂಲಕ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ. ಮಧ್ಯ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಇದಕ್ಕೂ‌ ಮೊದಲು ಹಿಂದುಳಿದ ವರ್ಗದ ನಾಯಕರ ರಾಜ್ಯ ಪ್ರವಾಸವೂ ನಡೆಯಲಿದ್ದು, ಆ ಮೂಲಕ ಎಸ್​ಸಿ, ಎಸ್​ಟಿ ಮತ್ತು ಓಬಿಸಿ ಸಮುದಾಯವನ್ನು ತಲುಪಲು ಕಾಂಗ್ರೆಸ್ ಕಸರತ್ತು ನಡೆಸಲಿದೆ. ಇದರೊಂದಿಗೆ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತ ಸಮಾವೇಶವನ್ನು ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾದ ಬೆನ್ನಲ್ಲೆ ಇದರ ಲಾಭ ಪಡೆದುಕೊಳ್ಳಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ನ.6ರಂದು ರಾಜ್ಯಮಟ್ಟದ ಬೃಹತ್ ಎಸ್​ಟಿ ಸಮಾವೇಶವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮೂಲಕ ಮೀಸಲಾತಿ ಹೆಚ್ಚಳ ಮಾಡಿರುವುದು ಬಿಜೆಪಿ ಎಂಬ ಮಾಹಿತಿಯನ್ನು ಮನೆ ಮನೆಗೆ ‌ಮುಟ್ಟಿಸಲು‌ ಯೋಜನೆ ರೂಪಿಸಿದೆ.


Spread the love

About Laxminews 24x7

Check Also

ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ

Spread the love ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ