Breaking News

ಮುಂದಿನ ಚುನಾವಣೆ ಕ್ಷೇತ್ರ ಘೋಷಿಸಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ

Spread the love

ಚಿತ್ರದುರ್ಗ: ದೀಪಾವಳಿ ದಿನದಂದೇ ಮೀಸಲಾತಿ ಜಾರಿಯಾಗಿದ್ದು, ಇದೇ ದಿನ ವಾಲ್ಮೀಕಿ ಪುತ್ಥಳಿ ಅನಾವರಣವಾಗುತ್ತಿರುವುದು ಸಂತೋಷ ತಂದಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, 2023 ರ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಾರಿಗೆ ಸಚಿವ ಬಿ.

ಶ್ರೀರಾಮುಲು ಘೋಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಎಂದು ಕೂಡ ಹಿಂದೆ ಸರಿಯಲಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಸಾವಿರಾರು ಜನ ನಿಂದಿಸಿದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮೀಸಲಾತಿ ಜಾರಿ ಮಾಡುವ ಮೂಲಕ ವಿರೋಧಿಗಳಿಗೆ ಉತ್ತರ ನೀಡಿದ್ದೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ