Breaking News

ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು: ಕಾಂಗ್ರೆಸ್ ಟೀಕೆ

Spread the love

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ನಡೆಸುವ ಟೀಕೆಗಳನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಳ್ಳುತ್ತಿದೆ. ಇದೀಗ ‘ನನ್ನ ತಂಟೆಗೆ ಬಂದರೆ ಹಾವು ಬಿಡುತ್ತೇನೆ’ ಎಂದು ಯತ್ನಾಳ್ ಹೇಳಿಕೆ ಬಳಸಿಕೊಂಡು ಕಾಂಗ್ರೆಸ್ ವ್ಯಂಗ್ಯವಾಡಿದೆ.

 

ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! ಯತ್ನಾಳರ ಹಾವು ಯಾವುದು ಬಿಜೆಪಿ? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ ಎಂದು ಪ್ರಶ್ನಿಸಿದೆ.

ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿ ಕನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ಅಂಕಿ ಅಂಶ ಸರ್ಕಾರದ ಅಂದಾಜಿಗಿಂತ ಭಿನ್ನ: ರಾಜ್ಯದ ಒಟ್ಟು ಸಾಲ 8.14 ಲಕ್ಷ ಕೋಟಿ ರೂ.ಗೆ ಏರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Spread the loveಭಾರತೀಯ ರಿಸರ್ವ್ ಬ್ಯಾಂಕ್ (RBI) ವರದಿಯನ್ನು ಉಲ್ಲೇಖಿಸಿ, ಕರ್ನಾಟಕದ ಒಟ್ಟು ಸಾಲಗಳು 2025-26ರಲ್ಲಿ ₹8.14 ಲಕ್ಷ ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ