ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಓರ್ವ ಬಹಳ ಸಮಯದವರೆಗೆ ಮೇಲೆ ಬಂದಿಲ್ಲ. ಹೀಗೆ ನೀರಿನಲ್ಲಿ ನಾಪತ್ತೆಯಾಗಿರುವ ಯುವಕನ ಹೆಸರು 22 ವರ್ಷದ ಸತೀಶ ಎನ್ನಲಾಗುತ್ತಿದೆ. ಈತ ಎಲ್ಲಿಯವನು..? ಏನು ಎತ್ತ ಎಂಬ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ದೌಡಾಯಿಸಿದ್ದರು.
ಅಲ್ಲದೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎಸ್‍ಡಿಆರ್‍ಎಫ್ ಸಿಬ್ಬಂದಿಗಳು ಕೂಡ ಆಗಮಿಸಿ ಯುವಕನಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7