Breaking News

ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ

Spread the love

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಇದೇ ತಿಂಗಳು 28 ರಂದು ಆಯೋಜಿಸಿರುವ ” ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1 ಕೋಟಿ 10 ಲಕ್ಷ ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.

 

ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಅಕ್ಟೋಬರ್ 28 ರಂದು ಕೋಟಿ ಕಂಠ ಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ.

ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್ ನಲ್ಲಿ 1.1 ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ 1.10 ಕೋಟಿಗೆ ತಲುಪಿದೆ. ಮುಂದಿ‌ನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆ : ಈ ಕಾರ್ಯಕ್ರಮದ ನಿಮಿತ್ತ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಸಭೆಗಳು ನಡೆದಿವೆ.‌ ಆಟೊ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ- ಕಾಲೇಜು, ಚಾಲಕ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಖುದ್ದು ಸಭೆ ನಡೆಸಿದ್ದಾರೆ.

ಆರು ಗೀತೆ :

ಅಕ್ಟೋಬರ್‌ ೨೮ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ ” , ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ ” ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ” ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.

ಎಲ್ಲೆಲ್ಲಿ:

ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ತಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ