Breaking News

ಬೆಳಗಾವಿ: ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥ

Spread the love

ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ.

ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ನಳಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. 

ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Spread the loveಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ