Breaking News
Home / ಜಿಲ್ಲೆ / ಬೆಳಗಾವಿ / ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ M.E.S.ಸಿದ್ಧತೆ

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ M.E.S.ಸಿದ್ಧತೆ

Spread the love

ಬೆಳಗಾವಿ: ನಾಡದ್ರೋಹಿ ಎಂಇಎಸ್‍ನಿಂದ (MES) ಮತ್ತೆ ಗಡಿ ಖ್ಯಾತೆ ಆರಂಭವಾಗಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು (Kannada Rajyotsava) ಎಂಇಎಸ್ ಮುಖಂಡರು ಕರಾಳ ದಿನಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ ದಿನ ಆಚರಿಸುವ ಕುರಿತಾಗಿ ಪೋಸ್ಟ್ ಹಾಕಿದ್ದಾರೆ.

ನವೆಂಬರ್ 1ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮೂಲೆಮೂಲೆಗಳಿಂದ ಕನ್ನಡ ರಾಜ್ಯೋತ್ಸವ ನೋಡಲು ಜನರು ಬೆಳಗಾವಿಗೆ ಆಗಮಿಸುತ್ತಾರೆ. ಆದ್ರೆ, ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಎಂಇಎಸ್ ಮುಂದಾಗಿದೆ. ಚಳಿಗಾಲದ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ನಡೆಯಲು ಸಿದ್ಧತೆ ಹಾಗೂ ನವೆಂಬರ್ 1 ರಂದು ಎಂಇಎಸ್‍ನಿಂದ ಕರಾಳ ದಿನಕ್ಕೆ ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ ದಿನದ ಬಗ್ಗೆ ಪೋಸ್ಟ್ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಫೇಸ್‍ಬುಕ್ ಪೇಜ್‍ನಲ್ಲಿ ನಾಡದ್ರೋಹಿಗಳಿಂದ ಪೋಸ್ಟ್ ಮಾಡಲಾಗಿದೆ.

ಇದಲ್ಲದೇ ಡಿಸೆಂಬರ್‌ನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವ್ ಮಾಡಲು ಎಂಇಎಸ್ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಅಧಿವೇಶನದ ಸಂದರ್ಭದಲ್ಲಿ ಗಡಿ ಖ್ಯಾತೆ ತೆಗೆಯಲು ಎಂಇಎಸ್ ಪ್ಲಾನ್ ಮಾಡಿಕೊಂಡಿದೆ. ಚುನಾವಣಾ ವರ್ಷ ಆಗಿದ್ದರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುನ್ನಾರ ನಡೆಸಲಾಗುತ್ತಿದೆ. ಎಂಇಎಸ್‍ನ ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದ ಎಂಇಎಸ್ ಮುಖಂಡರಿಂದ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗಿದೆ. 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ