Breaking News

ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

Spread the love

ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ ಮೇಜರ್ ಟ್ವಿಸ್ಟ್ ಪಡೆದುಕೊಂಡಿದೆ. ನಿನ್ನೆ ಶ್ರೀಗಳು ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‍ನ ಒಂದು ಪುಟ ವೈರಲ್ ಆದ ಬೆನ್ನಲ್ಲೆ ಇದೀಗ ಶ್ರೀಗಳ ವೀಡಿಯೋ ಕಾಲ್ ತುಣುಕೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯೊಬ್ಬಳ ಜೊತೆ ಸ್ವಾಮೀಜಿ ವೀಡಿಯೋ ಕಾಲ್‍ನಲ್ಲಿ ಮಾತನಾಡುತ್ತಿರುವ ವೀಡಿಯೋ ದೊರೆತಿದ್ದು, ಇದರ ಹಿಂದಿರುವ ಕಾಣದ ಕೈಗಳ ಹುಡುಕಾಟ ಶುರುವಾಗಿದೆ.

ಆದರೆ ಸ್ವಾಮಿಗಳ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಾಗಿದ್ದು, ಎಫ್‍ಐಆರ್‌ನಲ್ಲಿ ಅನಾಮಧೇಯ ಹೆಸರಿನಲ್ಲಿ 1 ಆರೋಪಿ ಎಂದು ಹೇಳಲಾಗಿದೆ. ಸ್ವಾಮೀಜಿಯ ಡೆತ್ ನೋಟ್‍ನಲ್ಲಿ ಹಲವರ ಹೆಸರು ಉಲ್ಲೇಖವಾಗಿದ್ದರೂ ಯಾರ ಹೆಸರೂ ಸಹ ಎಫ್‍ಐಆರ್‌ನಲ್ಲಿ ದಾಖಲಾಗದೆ ಇರೋದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡಲಾಗ್ತಿದ್ಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಇನ್ನು ಶ್ರೀಗಳನ್ನು ಖೆಡ್ಡಾಗೆ ಕೆಡವಲು 6 ತಿಂಗಳಿನಿಂದ ಕೆಲ ವ್ಯಕ್ತಿಗಳು ಕುತಂತ್ರ ಹೆಣೆಯಲಾಗಿತ್ತಂತೆ. ಮಹಿಳೆಯೊಂದಿಗೆ ಮಾತನಾಡುತ್ತಿದ್ದ ವೀಡಿಯೋ ಇರುವುದನ್ನು 1 ತಿಂಗಳ ಹಿಂದೆ ಶ್ರೀಗಳ ಗಮನಕ್ಕೆ ತರಲಾಗಿದ್ದು, ಈ ವಿಚಾರ ಗೊತ್ತಾಗುತ್ತಿದ್ದಂತೆ ಬಸವಲಿಂಗ ಸ್ವಾಮೀಜಿ ಖಿನ್ನತೆಗೆ ಒಳಗಾಗಿದ್ದರಂತೆ. ಸದ್ಯ ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ಒಂದು ವರ್ಷದ ಕಾಲ್ ಡಿಟೇಲ್ಸ್ ತೆಗೆದು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ