Breaking News
Home / ರಾಜಕೀಯ / ಲಿವಿಂಗ್ ಟುಗೆದರ್ ಟೆನ್ಶನ್- ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ

ಲಿವಿಂಗ್ ಟುಗೆದರ್ ಟೆನ್ಶನ್- ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ

Spread the love

ಬೆಂಗಳೂರು: ಪತಿ-ಪತ್ನಿ ಕಲಹ, ವರದಕ್ಷಿಣೆ ಕಿರುಕುಳ, ಮದುವೆಯಾಗೋದಾಗಿ ನಂಬಿಸಿ ಮೋಸ ಹೀಗೆ ನಾನಾ ಕೇಸ್‍ಗಳನ್ನು ಆಟೆಂಡ್ ಮಾಡ್ತಿರುವ ಮಹಿಳಾ ಆಯೋಗಕ್ಕೆ ಈಗ ಹೊಸ ತಲೆನೋವು ಶುರುವಾಗಿದೆ ಅದೇ ಲಿವಿಂಗ್ ಟುಗೆದರ್ (Living Together) ಕಂಟಕ.

ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗ (Women Commission) ದ ಮೆಟ್ಟಿಲೇರುತ್ತಿದ್ದಾರಂತೆ. ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ ಟುಗೆದರ್ ನಿರ್ಧಾರವನ್ನು ತೆಗೆದುಕೊಂಡು ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ಸಾಗಿಸ್ತಾರೆ. ಆದರೆ ವರ್ಷ ಕಳೆಯೋದ್ರೊಳಗೆ ಗಲಾಟೆ ಶುರುವಾಗಿ ಹೆಣ್ಣುಮಕ್ಕಳು ನ್ಯಾಯ ಕೊಡಿಸಿ ಅಂತಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ. ಲಿವಿಂಗ್ ಟುಗೆದರ್ ಚಾಳಿಯಿಂದ ಹೆಣ್ಣುಮಕ್ಕಳು ತಮ್ಮ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇನ್ನು ಇಂತಹ ಕೇಸ್‍ನಲ್ಲಿ ನ್ಯಾಯ ಒದಗಿಸೋದು ಕೂಡ ಕಷ್ಟ ಅಂತ ಆಯೋಗದ ಅಧ್ಯಕ್ಷರು ಹೇಳುತ್ತಾರೆ.

ಇನ್ನು ಪ್ರಮುಖವಾಗಿ ವಿದ್ಯಾರ್ಥಿನಿಯರಲ್ಲಿ, ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಈಗಾಗಲೇ ಲಿವಿಂಗ್ ಟುಗೆದರ್ ಮೋಸದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಆಯೋಗ ಮಾಡಲು ನಿರ್ಧರಿಸಿದ್ದು ಹಲವಡೆ ಪ್ರಾಯೋಗಿಕವಾಗಿ ಆರಂಭಿಸಿದೆ. ಲಿವಿಂಗ್ ಟುಗೆದರ್ ಚಾಳಿಯಿಂದಾಗಿ ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಸಮಸ್ಯೆಯಾಗುತ್ತಿದೆ. ಖಿನ್ನತೆಯಂತಹ ಸಮಸ್ಯೆ ಕೂಡ ಎದುರಿಸಬೇಕಾಗಿದ್ದು ಆತಂಕಕ್ಕೆ ಕಾರಣವಾಗ್ತಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ