Breaking News

ಸಚಿವ ಸಂಪುಟ ವಿಸ್ತರಣೆ ಆಗಲಿ, ಬಿಡಲಿ ನಾನಂತೂ ಅದರಲ್ಲಿ ಇಲ್ಲ ಎಂದ ಯತ್ನಾಳ್

Spread the love

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಪುಟ ವಿಸ್ತರಣೆ ಆಗಲಿ, ಬಿಡಲಿ ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನಗೆ ಕರೆ ಮಾಡಿದ್ದರು.

ಡಿಸೆಂಬರ್ ನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಈ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಲಾಗುತ್ತದೆ. ವಿಜಯಪುರ ಮಹಾನಗರ ಪಾಲಿಕೆಗೆ ಹೆಚ್ಚುವರಿ 100 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಅಸಾದುದ್ದೀನ್ ಓವೈಸಿ ತನ್ನ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದು, ಹಿಜಾಬ್ ಹಾಕಿಕೊಂಡವರು ದೇಶದ ಪ್ರಧಾನಿ ಆಗುವ ಕನಸಿದೆ ಎಂದು ಹೇಳಿದ್ದರು. ಅಲ್ಲದೇ ಬಿಜೆಪಿ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದ್ದರು. ಓವೈಸಿ ಹೇಳಿಕೆಗೆ ಕಿಡಿಕಾರಿರುವ ಯತ್ನಾಳ್, ದೇಶದ ಅನ್ನ ತಿಂದು ಪಾಕಿಸ್ತಾನದ ಪರ ಮಾತನಾಡುವವರನ್ನು ಬಿಜೆಪಿ ವಿರೋಧಿಸುತ್ತದೆ. ಭಾರತವನ್ನೇ ಇಸ್ಲಾಮಿಕ್ ಮಾಡುತ್ತೆವೆ ಎಂದು ಎಸ್ ಡಿಪಿಐ ಹೇಳಿತ್ತು. ಆದರೆ ಆ ಕನಸು ಯಾವತ್ತೂ ಸಾಧ್ಯವಾಗಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

Spread the loveವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ