ಬೆಂಗಳೂರು: ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿದೆ.
ಎಸ್‌ಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಕಡ್ಡಾಯಗೊಳಿಸಿರುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಎಸ್‌ಎಸ್‌ಸಿ ಧೋರಣೆಯಿಂದ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಘಟನೆ
ಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಗಡಿ ಭದ್ರತಾ ಪಡೆ(ಬಿಎಸ್‌ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಇಂಡೊ ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಸಚಿವಾಲಯ ಭದ್ರತಾ
ಪಡೆಯಲ್ಲಿ (ಎಸ್‌ಎಸ್‌ಎಫ್) ಕಾನ್‌ಸ್ಟೆಬಲ್ ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್‌ಮೆನ್ (ಜನರಲ್ ಡ್ಯೂಟಿ) ಹಾಗೂ ಮಾದಕ ದ್ರವ್ಯ ನಿಯಂತ್ರಣ (ಎನ್‌ಸಿಬಿ) ಇಲಾಖೆಯಲ್ಲಿ ಸಿಪಾಯಿ ಹುದ್ದೆಗಳಿಗೆ ಎಸ್‌ಎಸ್‌ಸಿ ಅರ್ಜಿ ಆಹ್ವಾನಿಸಿದೆ.
ಅ.27ರಿಂದ ನ.30ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 2023ರ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಎಸ್‌ಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
‘