Breaking News

ಮುರುಘಾ ಶ್ರೀ ಜಾಮೀನು ಆಕ್ಷೇಪಣೆಗೆ ವಾರ ಗಡುವು ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀ

Spread the love

ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ.

 

ಶ್ರೀಗಳ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಶ್ರೀಗಳ ಪರ ಹಾಜರಿದ್ದ ವಕೀಲೆ ಸ್ವಾಮಿನಿ ಗಣೇಶ್ ಮೋಹನಂಬಾಳ್, ‘ಸಂತ್ರಸ್ತರ ಪರವಾಗಿ ಮಣಿ ಎಂಬ ಮಹಿಳೆ ವಕಾಲತ್ತು ಸಲ್ಲಿಸಿದ್ದಾರೆ. ತಾವು ಬಾಲಕಿಯರ ಪೋಷಕರು ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಕಾಲತ್ ನಾಮೆಗೆ ಸಂತ್ರಸ್ತ ಬಾಲಕಿ ಯರು ಒಪ್ಪಿಗೆ ನೀಡಿರುವ ಬಗ್ಗೆ ಅಧಿಕೃತ ದಾಖಲೆಯಿಲ್ಲ’ ಎಂದು ಆಕ್ಷೇಪಿಸಿದರು.

‘ಈ ಕುರಿತಂತೆ ಲಿಖಿತ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಒಂದು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮುರುಘಾ ಶ್ರೀಗಳನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ