Breaking News

ಜಿಮ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ತರಲು ಒತ್ತು: ಮುರುಗೇಶ ನಿರಾಣಿ

Spread the love

ಹುಬ್ಬಳ್ಳಿ: ‘ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ, ಹುಬ್ಬಳ್ಳಿ ಮತ್ತು ಬೆಳಗಾವಿ ಮಧ್ಯೆ ಇರುವ ಕಿತ್ತೂರು ಮತ್ತು ಕಲಬುರಗಿಯಲ್ಲಿ ಮೂರು ಸಾವಿರ ಎಕರೆ ಪ್ರದೇಶದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮಾಡೇ ಮಾಡುತ್ತೇವೆ’ ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

 

‘ಎರಡನೇ ಹಂತದ ನಗರಗಳಿಗೆ ಉದ್ಯಮಗಳು ಬರಬೇಕಾದರೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯಗಳು ಅಗತ್ಯ. ಇದಕ್ಕಾಗಿ ರಾಜ್ಯ ಸರ್ಕಾರ ದಾವಣಗೆರೆ, ಬಾಗಲಕೋಟೆಯ ಬಾದಾಮಿ, ರಾಯಚೂರು, ಕೊಪ್ಪಳ ಹಾಗೂ ಚಿಕ್ಕಮಗಳೂರಿನಲ್ಲಿ ದೇಶಿಯ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಮುಂದಾಗಿದೆ. ‌ಮುಂದಿನ 18 ತಿಂಗಳಲ್ಲಿ ನಿಲ್ದಾಣಗಳು ಪೂರ್ಣಗೊಳ್ಳಲಿವೆ’ ಎಂದು ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉತ್ತರ ಕರ್ನಾಟಕಕ್ಕೆ ಒತ್ತು: ‘ಬೆಂಗಳೂರಿನಲ್ಲಿ ನ. 2ರಿಂದ 4ರವರೆಗೆ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್) ₹5 ಲಕ್ಷ ಕೋಟಿ ಹೂಡಿಕೆಯೊಂದಿಗೆ 5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದೇವೆ. ಇದರಲ್ಲಿ, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ತರಲು ಒತ್ತು ನೀಡಲಾಗುವುದು. ಬೆಂಗಳೂರು ಹೊರತುಪಡಿಸಿದ ನಗರಗಳಿಗೆ ಬರುವ ಕೈಗಾರಿಕೆಗಳಿಗೆ ಸರ್ಕಾರ ರಿಯಾಯಿತಿ ಜೊತೆಗೆ, ಹಲವು ಸೌಕರ್ಯಗಳನ್ನು ನೀಡುತ್ತಿದೆ’ ಎಂದರು.’ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗಾಗಿ 50 ಸಾವಿರ ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಈ ಪೈಕಿ, 20 ಸಾವಿರ ಎಕರೆಯನ್ನು ಬೆಂಗಳೂರು ಹೊರವಲಯದಲ್ಲಿ ಮತ್ತು ಉಳಿದದ್ದನ್ನು ಬೇರೆ ಜಿಲ್ಲೆಗಳಲ್ಲಿ ಕಾಯ್ದಿರಿಸಲಾಗಿದೆ. ಕರ್ನಾಟಕವು ವಿದೇಶಿ ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೋವಿಡ್-19 ಬಳಿಕ, ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸುತ್ತಿರುವ ಮೊದಲ ರಾಜ್ಯ ನಮ್ಮದು’ ಎಂದು ಸಂತಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ