ಶಿವಮೊಗ್ಗ: ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.
ಪರೇಶ್ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ ಪ್ರಕರಣವನ್ನು ನಾನು ಸಿಬಿಐ ಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿ ಅವರು. ಗೃಹ ಸಚಿವರಾಗಿದ್ದವರು ಅಮಿತ್ ಶಾ ಅವರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಿದ್ದಾರೆ, ಇವರ ಯೋಗ್ಯತೆಗೆ 2008 ರಿಂದ 2013ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರಾ? ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು, ಜೆಡಿಎಸ್ ನವರು ಚೋರ್ ಬಚಾವೋ ಇನ್ಸ್‌ಟಿಟ್ಯೂಟ್ ಎನ್ನುತ್ತಿದ್ದರು. ಈಗ ಸಿಬಿಐ ಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ? ಬಿಜೆಪಿ ಅವರ ಕೆಲಸ ಅಪಪ್ರಚಾರ ಮತ್ತು ಸುಳ್ಳು ಹೇಳುವುದು ಎಂದು ಟೀಕಿಸಿದರು.
ಭಾರತ ಐಕ್ಯತಾ ಯಾತ್ರೆಯ ಉದ್ದೇಶ ದ್ವೇಷ ರಾಜಕಾರಣದಿಂದ ಒಡೆದು ಹೋಗಿರುವ ಮನಸುಗಳನ್ನು ಒಂದುಗೂಡಿಸುವುದು, ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರ ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಆದರೆ ಬಿಜೆಪಿಯವರು ರಾಹುಲ್ ಗಾಂಧಿ ಅವರ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಯಾತ್ರೆಯ ಬಗ್ಗೆ ತಪ್ಪು ಮಾಹಿತಿ ನೀಡಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.