Breaking News

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

Spread the love

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ.

ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ ಮತ್ತು ನಾಡದ್ರೋಹಿ ಎಂಇಎಸ್ ಎಂದಿನಂತೆ ತನ್ನ ಖಯಾಲಿ ಮುಂದುವರಿಸಿದೆ.

ಪ್ರತಿ ವರ್ಷದ ಪದ್ಧತಿಯಂತೆ ಈ ಬಾರಿಯೂ ನಮಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಪ್ರವೇಶಕ್ಕೆ ಶಿವಸೇನೆ ಮುಂದಾಗಿತ್ತು. ಕೊಲ್ಹಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ನೇತೃತ್ವದಲ್ಲಿ ರಾಜ್ಯ ಪ್ರವೇಶಕ್ಕೆ ಮುಂದಾದ ಶಿವಸೇನೆಯ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಕುಗನೊಳ್ಳಿ ಚೆಕ್‌ಪೋಸ್ಟ್ ಬಳಿ ತಡೆದಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ