Breaking News

ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು.

 

 

ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೂಡಲಗಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮೂಡಲಗಿ ಪುರಸಭೆ ಮಾಜಿ ಸದಸ್ಯ ಮರೆಪ್ಪ ಮರೆಪ್ಪಗೋಳ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ