Breaking News

ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್!: ಶೀಘ್ರವೇ ನಂದಿನ ಹಾಲಿನ ದರ 3 ರೂ. ಹೆಚ್ಚಳ

Spread the love

ಬೆಳಗಾವಿ: ಶೀಘ್ರವೇ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇದರಿಂದ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ರಾಜ್ಯದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ದರ ಪರಿಷ್ಕರಣೆಯ ಸಂಪೂರ್ಣ ಹಣವು ರೈತರಿಗೆ ಸಿಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯದ 16 ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಹೀಗಾಗಿ ಬೆಲೆ ಏರಿಕೆ ಮಾಡುವುದು ನಮಗೆ ಅನಿವಾರ್ಯವಾಗಿದೆ. ದರ ಏರಿಕೆ ಬಗ್ಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

 

ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆಂದು ಕೆಎಂಎಫ್ ಹೇಳಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಅನುಮೋದನೆ ಇಲ್ಲದಿದ್ದರೂ ಹಾಲಿನ ಬೆಲೆಯನ್ನು ಪ್ರತಿ ಲೀಟರ್​ಗೆ 3 ರೂ. ಹೆಚ್ಚಿಸಲು KMF ಮುಂದಾಗಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿನಿಂದ ಕೆಎಂಎಫ್‌ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದೆ. ಆದರೆ ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ದರ ಏರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ದಿನ ಬಳಕೆ ವಸ್ತುಗಳು ಸೇರಿ ಎಲ್ಲಾ ರೀತಿಯ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೀಗ ಹಾಲಿನ ದರವನ್ನು ಸಹ ಏರಿಸಲು ನಿರ್ಧರಿಸಿರುವುದರಿಂದ ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ