Breaking News

ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖ

Spread the love

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.

ಬಿಡುಗಡೆ ಹೊಂದಿದವರ ವಿವರ:

ಕ್ಯಾಂಪ್ ಪ್ರದೇಶ –
ಪಿ-355
ಪಿ-356
ಪಿ-358
ಪಿ-359

ಕುಡಚಿ-
ಪಿ-296
ಪಿ-297
ಪಿ-299
ಪಿ-301

ಸಂಕೇಶ್ವರ- ಪಿ-293; ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ