Breaking News

ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್

Spread the love

ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BandeMutt Basavalinga Swamji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.

 

ಡೆತ್‍ನೋಟ್‍ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು (Magadi Police) ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟನಲ್ಲಿ ವಿಚಾರಣೆ ನಡೆಸಲಾಗುತ್ತದೆ.

 

ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಡೆತ್‍ನೋಟ್‍ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗ್ತೀದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನ ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಪ್ರತಿಷ್ಠಿತ ಮಠದ ಶ್ರೀಗೂ ಬಲೆ ಬೀಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ