Breaking News

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

Spread the love

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು.
ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ.

ಪ್ರಕರಣ ಸಂಬಂಧ ಉಲ್ಬಥ್ ಅಲಿಯಾಸ್ ನಾಮ್, ಮಲಿಕ್ ಹಾಗೂ ಮುಬಾರಕ್ ಅಲಿಯಾಸ್ ಟುಬೋ ನನ್ನು ಕಸಬಾಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯಲ್ಲೂ ಹೀನ ಕೃತ್ಯ

ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಎಳೆದೊಯ್ದು ಅತ್ಯಾಚಾರ, ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಈ ಘಟನೆ ನಡೆದಿದ್ದು, ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದೀಗ ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಆರೋಪಿಯನ್ನು ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.15 ವರ್ಷದ ಬಾಲಕಿ ಮೇಲೆ ಈ ಘಟನೆ ನಡೆದಿದ್ದು, ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಘಟನ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ