Breaking News

ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

Spread the love

ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ನಿಂದಿಸಿ ಕಿರುಚಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪೊಲೀಸರ ವಾಹನದ ಮೇಲೆ ಮಹಿಳೆಯರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ ಬಳಿಕ ಪರಿಸ್ಥಿತಿ ಅತೀರೇಕಕ್ಕೆ ತಲುಪಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ವೈರಲ್ ಆಗುತ್ತಿರುವ ವೀಡಿಯೋ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ (Ambedkar Nagar district) ಜಲಾಲ್‍ಪುರದಾಗಿದ್ದು (Jalalpur), ಇತ್ತೀಚೆಗಷ್ಟೇ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಭೂ ವಿವಾದವಿರುವ ಸ್ಥಳದಲ್ಲಿ ಪ್ರತಿಮೆ ಇರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಭಾನುವಾರ ಮಹಿಳೆಯರ ಗುಂಪು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಚದುರಿಸಲು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದರು. ಅಲ್ಲದೇ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೂದಲು ಹಿಡಿದುಕೊಂಡು ಎಳೆದಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ