Breaking News

ವಿನಯ್ ಕುಲಕರ್ಣಿಗೆ ಶಕ್ತಿ ತುಂಬಿದ ಲಕ್ಷಾಂತರ ಅಭಿಮಾನಿಗಳು..!

Spread the love

ಚನ್ನಮ್ಮ ಕಿತ್ತೂರಿನಲ್ಲಿ ನಡೆದ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟು ಹಬ್ಬದ ಕಾರ್ಯಕ್ರಮ ಹೊಸ ಇತಿಹಾಸ ಬರೆದಿದೆ. ನಾಡಿನ ಮಠಾಧೀಶರು, ಕಾಂಗ್ರೆಸ್ ಘಟಾನುಘಟಿ ನಾಯಕರು, ಲಕ್ಷಾಂತರ ಅಭಿಮಾನಿಗಳು, ಕಾರ್ಯರ್ತರು ಭಾಗಿಯಾಗಿ ವಿನಯ್ ಕುಲಕರ್ಣಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗೆ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ವೇದಿಕೆಯನ್ನು ಸಿದ್ಧಮಾಡಿಕೊಂಡಿದ್ದಾರೆ.

ಹೌದು ಮಾಜಿ ಸಚಿವ ವಿನಯ್ ಕುಲಕರ್ಣಿ ಉತ್ತರಕರ್ನಾಟಕದ ಪ್ರಭಾವಿ ರಾಜಕಾರಣಿ. ಅದರಲ್ಲಿಯೂ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಂಚೂಣಿ ನಾಯಕ. ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿರುವ ವಿನಯ್ ಜಿ.ಪಂ.ಸದಸ್ಯ ಯೋಗೀಶಗೌಡ ಕೊಲೆ ಕೇಸ್‍ನಲ್ಲಿ ಕೋರ್ಟ ಆದೇಶದಂತೆ ಧಾರವಾಡ ಜಿಲ್ಲೆಯಿಂದ ಹೊರಗೆ ಇದ್ದಾರೆ. ಹೊರಗೆ ಇದ್ದರೂ ಕೂಡ ಪಕ್ಕದ ಕಿತ್ತೂರಿನಲ್ಲಿ ಇದ್ದುಕೊಂಡೇ ನಮ್ಮ ಮುಂದಿನ ಚುನಾವಣೆಗೆ ಭೂಮಿಕೆಯನ್ನು ರೆಡಿ ಮಾಡಿಕೊಳ್ಳುತ್ತಿದ್ದಾರೆ. ಅದರ ಭಾಗವಾಗಿ ಸೋಮವಾರ ಚನ್ನಮ್ಮ ಕಿತ್ತೂರಿನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವ ಮೂಲಕ ವಿರೋಧಿಗಳಿಗೆ ನಡುಕ ಹುಟ್ಟಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಎಂ.ಬಿ.ಪಾಟೀಲ್ ಸೇರಿ ಘಟಾನುಘಟಿ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಪಂಚಮಸಾಲಿ ಮಠದ ಬಸವ ಮೃತ್ಯುಂಜಯ ಸ್ವಾಮೀಜಿ, ಬೈಲೂರಿನ ನಿಜಗುಣಾನಂದ ಸ್ವಾಮೀಜಿ, ವಿಜಯಪುರ ದರ್ಗಾದ ಸಯ್ಯದ್ ಶಾ ಮುರ್ತುಜಾ ಸೇರಿದಂತೆ ಹಲವಾರು ಮಠಾಧೀಶರು ಪಾಲ್ಗೊಂಡಿದ್ದರು. ಇನ್ನು ಲಕ್ಷಾಂತರ ಅಭಿಮಾನಿಗಳು, ಕಾರ್ಯಕರ್ತರು ಭಾಗಿಯಾಗಿ ವಿನಯ್ ಕುಲಕರ್ಣಿ ಅವರಿಗೆ ಶುಭ ಹಾರೈಸಿದರು. ಈ ವೇಳೆ ಕಣ್ಣು ಹಾಯಿಸಿದ ಕಡೆಯಲ್ಲಾ ಜನವೋ ಜನ ಕಾಣುತ್ತಿದ್ದರು. ಅಷ್ಟೋಂದು ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬಂದಿತ್ತು


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ