ಉಡುಪಿ: ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.ಇನ್ನು ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಮುರುಘಾ ಶ್ರೀ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
Laxmi News 24×7