Breaking News

ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಸಿದ್ದರಾಮಯ್ಯ ಗರಂ!

Spread the love

ಹುಬ್ಬಳ್ಳಿ: ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್‌ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು.

ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು ಕೆರಳಿಸಿತು. ಘೋಷಣೆ ಕೂಗುವವರನ್ನು ಸುಮ್ಮನಿರುವಂತೆ ಗದರಿದರು. ಬಳಿಕ ಘೋಷಣೆ ಕೂಗುವವರು ತಣ್ಣಗಾದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ