Breaking News

ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿ

Spread the love

ಚಿಕ್ಕಬಳ್ಳಾಪುರ: ಸಾರ್ವಜನಿಕರು ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಆಡಳಿತ ವರ್ಗಕ್ಕೆ ಲಂಚ ಕೊಡಬಾರದು. ಅಧಿಕಾರಿ ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟರೆ ಜಿಲ್ಲಾ ಲೋಕಾಯುಕ್ತ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಿ ಎಂದು ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.

 

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕ ದೂರು ಅರ್ಜಿಗಳ ಸ್ವೀಕಾರ, ಅಹವಾಲುಗಳ ವಿಲೇವಾರಿ ಮತ್ತು ವಿಚಾರಣೆ ಸಭೆಗೂ ಮುನ್ನ ಅವರು ಮಾತನಾಡಿದರು.

ಆಡಳಿತ ವರ್ಗದ ಯಾರೊಬ್ಬರೂ ಲಂಚ ಪಡೆಯದೆ ಕೆಲಸ ನಿರ್ವಹಿಸುವುದೇ ದೇಶಕ್ಕೆ ಮತ್ತು ಸಮಾಜಕ್ಕೆ ನೀಡುವ ಕೊಡುಗೆ. ಈ ದಿಸೆಯಲ್ಲಿ ಎಲ್ಲರೂ ಸಂಕಲ್ಪ ಮಾಡಬೇಕು. ಸಾರ್ವಜನಿಕರು ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿಕೊಳ್ಳಲು ಯಾವುದೇ ರೂಪದಲ್ಲಿ ಲಂಚ ನೀಡಬಾರದು. ಅದೇ ರೀತಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೂಪದಲ್ಲಿ ಲಂಚ ಪಡೆಯದೆ ಪ್ರಾಮಾಣಿಕತೆ ಮೆರೆಯಬೇಕು ಎಂದರು.

ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಹಾಗೂ ಆಮಿಷಗಳನ್ನು ಬಯಸಿದ್ದರೆ ಅಂತಹವರ ವಿರುದ್ಧ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರ ಕಚೇರಿಗೆ ದೂರು ಸಲ್ಲಿಸಬಹುದು. ಲೋಕಾಯುಕ್ತ ಸಂಸ್ಥೆಯು ಕಾನೂನು ಪ್ರಕ್ರಿಯೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸುತ್ತದೆ. ನೊಂದವರು ನಿರ್ಭಿತಿಯಿಂದ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಲು ಮುಂದಾಗಬೇಕು. ಸಂಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಡಬೇಕು. ನೊಂದವರ, ಅನ್ಯಾಯಕ್ಕೆ ಒಳಗಾದವರ ಬೆಂಬಲಕ್ಕೆ ಸಂಸ್ಥೆ ದೃಢವಾಗಿ ನಿಲ್ಲುತ್ತದೆ. ಈ ಬಗ್ಗೆ ಸಂಶಯ ಬೇಡ ಎಂದು
ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ