Breaking News

ಸರ್ಕಾರ ಮೋದಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡು : ಕಾಂಗ್ರೆಸ್ ವಾಗ್ಧಾಳಿ

Spread the love

ಬೆಂಗಳೂರು : ‘ಸರ್ಕಾರ ಮೋದಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.

ಬೊಮ್ಮಾಯಿ ಅವರೇ ನಿಮ್ಮ ಸರ್ಕಾರಕ್ಕೆ ಯೂಟರ್ನ್ ಸರ್ಕಾರ ಎಂದು ಹೆಸರಿಟ್ಟುಕೊಳ್ಳಿ!

ಜನ ಬೆಂಬಲ ಕಳೆದುಕೊಂಡು, ಖಾಲಿ ಕುರ್ಚಿಗಳ ದರ್ಶನ ಪಡೆಯುತ್ತಿರುವ ಸರ್ಕಾರ ಈಗ ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆಸಿಕೊಳ್ಳಲು ಪ್ರಯತ್ನಿಸಿದ್ದು ನಾಚಿಕೆಗೇಡು. ವಿದ್ಯಾರ್ಥಿಗಳನ್ನು ಕರೆಸುವಂತೆ ಅಧಿಕಾರಿಗಳಿಗೆ ಹೇಳಿದವರಾರು ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆ ದಿನ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು, ಬಳಿಕ ಈ ವಿಚಾರ ಜನಾಕ್ರೋಶಕ್ಕೆ, ಟೀಕೆಗಳಿಗೆ ಕಾರಣವಾಗುತ್ತಿದ್ದಂತೆ ಸರ್ಕಾರ ಸುತ್ತೋಲೆ ವಾಪಸ್ ಪಡೆದಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ