Breaking News

ಭಾರೀ ಕುತೂಹಲ ಕೆರಳಿಸಿದೆ. ಬಾಲಚಂದ್ರ ಜಾರಕೊಹೊಳಿ ಮತ್ತು ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ

Spread the love

ಬೆಂಗಳೂರು,ನ.9- ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕ ಬಾಲಚಂದ್ರ ಜಾರಕೊಹೊಳಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

 

KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಅವರು ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಯಾವ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ.

ಬಾಲಚಂದ್ರ ಜಾರಕಿಹೊಳಿ ಮರಳಿ ಜೆಡಿಎಸ್‍ಗೆ ಬರುತ್ತಾರೆಯೇ ಅಥವಾ ಬಿಜೆಪಿಯಲ್ಲೆ ಉಳಿಯಲಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಆದರೆ, ಜಾರಕಿಹೊಳಿ ಅವರು ಕುಮಾರಸ್ವಾಮಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಂತಿಮವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಸಧ್ಯಕ್ಕೆ ನಿರ್ಧರಿಸಲಾಗದು. ಆಡಳಿತಾರೂಢ ಬಿಜೆಪಿ ಬಗ್ಗೆ ಜಾರಕಿಹೊಳಿ ಅವರ ಕುಟುಂಬದವರಲ್ಲಿ ತೀವ್ರ ಅಸಮಾಧಾನವಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

 

ಮೊದಲ ಬಾರಿಗೆ ಜೆಡಿಎಸ್‍ನಿಂದ ಶಾಸಕರಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು, ಮತ್ತೆ ಜೆಡಿಎಸ್‍ಗೆ ಮರಳುತ್ತಾರೆಯೇ ಅಥವಾ ಬಿಜೆಪಿಯಲ್ಲೇ ಉಳಿಯಲ್ಲಿದ್ದಾರೆಯೇ ಎಂಬ ಬಗ್ಗೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ಗುರಿ ಹೊಂದಿರುವ ಜೆಡಿಎಸ್ ನಾಯಕರು, ಪ್ರಭಾವಿ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ.

 

 


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ