ರಾಯಬಾಗ : ‘ಕೇಂದ್ರ ಸರ್ಕಾರ ನೀಡಿದ ಅಕ್ಕಿ ಚೀಲಗಳ ಮೇಲೆ ಸಿದ್ದರಾಮಯ್ಯ ತಮ್ಮ ಫೋಟೊ ಅಂಟಿಸಿಕೊಂಡರು. ಬೆಂಗಳೂರು, ಬಳ್ಳಾರಿ, ಮಂಗಳೂರಿನ ಮಣ್ಣಿನಲ್ಲೂ ಸಾಕಷ್ಟು ತಿಂದರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಪಟ್ಟಣದಲ್ಲಿ ಬುಧವಾರ ಬಿಜೆಪಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ‘ಕೇಂದ್ರದ ಬಿಜೆಪಿ ಸರ್ಕಾರ ನೀಡಿದ ಅನ್ನದಲ್ಲೂ ಕನ್ನ ಹಾಕಿದವರು ಸಿದ್ದರಾಮಯ್ಯ. ಸಣ್ಣ ನೀರಾವರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ದೊಡ್ಡ ಮೊತ್ತದ ಬಿಲ್ ತೆಗೆದು ಲೂಟಿ ಮಾಡಿದರು’ ಎಂದು ದೂರಿದರು.
‘ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋದರು’ ಎಂದರು.
Laxmi News 24×7