Breaking News

ಸಾಯಲು, ಶೂಟ್ ಮಾಡಲು ಸಿದ್ಧ: ಪ್ರಿಯಾಂಕ್ ಖರ್ಗೆ ವಿರುದ್ಧ ಮಣಿಕಂಠ ರಾಠೋಡ ವಾಗ್ದಾಳಿ

Spread the love

ಕಲಬುರಗಿ: ‘ಚಿತ್ತಾಪುರ ಕ್ಷೇತ್ರದ ನಾನು ಬಡವರ ಪರ ಕೆಲಸ ಮಾಡುತ್ತಿದ್ದೇನೆ.

 

‘ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನವರು ಮನಸ್ಸು ಮಾಡಿದರೇ ಬಿಜೆಪಿಯವರು ಜಿಲ್ಲೆಯಲ್ಲಿ ಓಡಾಡದಂತೆ ಮಾಡುವುದಾಗಿ ಹೇಳಿದ್ದಾರೆ. ಚಿತ್ತಾಪುರದಲ್ಲಿ ಬಹಿರಂಗವಾಗಿ ಓಡಾಡುತ್ತಿರುವ ನಾನು ಶಾಸಕರ ಎಲ್ಲಾ ಸವಾಲುಗಳನ್ನು ಒಪ್ಪಿ ಮುಖಾಮುಖಿ ಚರ್ಚೆಗೆ ಸಿದ್ಧ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಆನೆ ಬಲ ಬಂದಂತೆ ಆಡುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮನೆಗೆ ಕಳುಹಿಸುತ್ತೇವೆ. ರಾಜಕೀಯ ಒತ್ತಡ ತಂದು, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ನನ್ನ ವಿರುದ್ಧ ಗಡಿಪಾರು ಆದೇಶ ಹೊರಡುವಂತೆ ಮಾಡಿದರು. ಆದರೆ, ನನಗೆ ಗಡಿಪಾರು ಆದೇಶ ಬಂದಾಗ ನೀವೇ (ಪ್ರಿಯಾಂಕ್ ಖರ್ಗೆ) ಗಡಿಪಾರು ಆಗಿದ್ದೀರಾ’ ಎಂದು ವ್ಯಂಗ್ಯವಾಡಿದರು.

ತಡೆಯಾಜ್ಞೆ: ಅಕ್ರಮ ಪಡಿತರ ಸಾಗಣೆ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಯಾದ ಗಿರಿ ಜಿಲ್ಲೆಯ ಮಣಿಕಂಠ ರಾಠೋಡ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಮಣಿಕಂಠ ಗೆ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಗೆ 1 ವರ್ಷ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೆ ಅವರು ಗಡಿಪಾರು ಆದೇಶದ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ.

ಮಾತಿಗೂ ಮುನ್ನ ಕಾನೂನು ಅರಿಯಲಿ: ಪ್ರಿಯಾಂಕ್‌ ಖರ್ಗೆ
ಕಲಬುರಗಿ: ‘ಮನ ಬಂದಂತೆ ಮಾತನಾಡುವ ಮುನ್ನ ಮಣಿಕಂಠ ರಾಠೋಡ ಅವರು ಕಾನೂನು ಅರಿಯಬೇಕು. ಕೀಳುಮಟ್ಟದ ರಾಜಕಾರಣಕ್ಕೆ ಆಸ್ಪದ ನೀಡಬಾರದು’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ‘ಪ್ರಜಾವಾಣಿ’ಗೆ ತಿಳಿಸಿದರು.‌‌

‘ಚಿತ್ತಾಪುರದಲ್ಲಿ ಯಾವತ್ತೂ ಕೀಳುಮಟ್ಟದ ರಾಜಕಾರಣ ನಡೆದಿರಲಿಲ್ಲ. ಸುಳ್ಳು ಪ್ರಕರಣ ದಾಖಲಿಸುವ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವಂತಹ ಸ್ಥಿತಿ ಇರಲಿಲ್ಲ. ಆದರೆ, ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಇದೆಲ್ಲವೂ ನಡೆಯುತ್ತಿದೆ ಎಂಬರ್ಥದಲ್ಲಿ ಮಾತನಾಡಿದ್ದೆ’ ಎಂದು ಅವರು ತಿಳಿಸಿದರು.

‘ಗಡಿಪಾರು ಆದೇಶ ಹೊರಡಿಸಿದ್ದು ಅವರದ್ದೇ ಬಿಜೆಪಿ ಸರ್ಕಾರವೇ ಹೊರತು ಕಾಂಗ್ರೆಸ್‌ ಅಥವಾ ವಿರೋಧಪಕ್ಷದವರಲ್ಲ. ಇದನ್ನು ಅವರು ತಿಳಿದು ಮಾತನಾಡಬೇಕು’ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ