ಬೆಂಗಳೂರು: ರಾಜ್ಯದಲ್ಲಿ ಎಲ್ಲೇ ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪಿಸಿದರೂ ಅದನ್ನು ಧ್ವಂಸ ಮಾಡುತ್ತೇವೆಂಬ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಎಲ್ಲ ವರ್ಗದವರ ರಕ್ಷಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದ್ದು, ಅದು ಅವರ ಕರ್ತವ್ಯವೂ ಆಗಿದೆ ಎಂದರು
Laxmi News 24×7