Breaking News

ಹೆಸ್ಕಾಂ ಬೆಜವಾಬ್ದಾರಿ??? ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ದುರ್ಮರಣ

Spread the love

ವಿದ್ಯುತ್ ಇಲಾಖೆಯ ತುರ್ತು ನಿರ್ವಹಣೆಯ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹೊರವಲಯದಲ್ಲಿ ಕೆಇಬಿ ಕೆಲಸಕ್ಕೆ ದಿನಗೂಲಿ ಆಧಾರದ ಮೇಲೆ ಬಂದಿದ್ದ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ಹಣಮಂತ ಹಾಲಪ್ಪ ಮಗದುಮ್(೩೦) ಹಾಗೂ ಅಶೋಕ ಮಾಳಿ (೩೫) ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.

ವಿದ್ಯುತ್ ತಗುಲಿದ ತಕ್ಷಣವೇ ಕಾರ್ಮಿಕರನ್ನ ಸ್ಥಳೀಯರು ಬದುಕಿಸಲು ತುಂಬಾ ಪ್ರಯತ್ನಪಟ್ಟರು. ಕೆಇಬಿಗೆ ಮಾಹಿತಿ ಇದ್ದರೂ ಸಹ ಈ ರೀತಿ ವಿದ್ಯುತ್ ಪ್ರವಹಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಬೆಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ