Breaking News

ತಂದೆಯನ್ನು ಸೋಲಿಸಿದಂತೆ ಮಗನನ್ನೂ ಸೋಲಿಸುತ್ತೇವೆ: ಬಾಬುರಾವ್ ಚಿಂಚನಸೂರು

Spread the love

ಯಾದಗಿರಿ : ನಿಮ್ಮ ತಂದೆಗೆ ಸೋಲಿಸಿದಂಗ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನೂ ಸೋಲಿಸುತ್ತೇವೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಪ್ರಿಯಾಂಕ್ ಖರ್ಗೆ ವಿರುದ್ದ ಗುಡುಗಿದ್ದಾರೆ.

ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ,

ಮನಸ್ಸು ಮಾಡಿದ್ರೆ ಬಿಜೆಪಿ ಲೀಡರ್ ಓಡಾವುದಿಲ್ಲ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದಾರಲ್ಲ ಅವರಿಗೆ ಮನಸ್ಸು ಸ್ಥಿಮಿತದಲ್ಲಿ ಇಲ್ಲ ಶಾಸಕರಾಗಿ ಧಮ್ಕಿ ಮಾತು ಆಡಬಾರದಿತ್ತು. ಧಮ್ಕಿ ಮಾತನಾಡಿದ್ದು ಆತನ ಸಂಸ್ಕೃತಿ ತಿಳಿಸುತ್ತದೆ.ಸೋಲಿನ ಭಯದಲ್ಲಿ ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಧಮ್ಕಿ ಮಾತಿಗೆ ಯಾರು ಬಗ್ಗುವದಿಲ್ಲ ಎನ್ನುವುದನ್ನು ಪ್ರಿಯಾಂಕ ಖರ್ಗೆ ಅರಿತುಕೊಳ್ಳಬೇಕು. ಸೂರ್ಯ-ಚಂದ್ರ ಹುಟ್ಟೋದು ಎಷ್ಟಯ ಸತ್ಯವೋ ಮುಂದಿನ ಚುನಾವಣೆಯಲ್ಲಿ ಪ್ರಿಯಾಂಕ ಖರ್ಗೆ ಸೋಲುವುದು ಖಚಿತ ಎನ್ನುವುದನ್ನು ಮರೆಯಬಾರದು ಎಂದು ಸವಾಲೆಸೆದರು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಇತರರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ