Breaking News
Home / Uncategorized / ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

Spread the love

ಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನು ಹೈದ್ರಾಬಾದ್​ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು.

ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿ ಮುಖಂಡನ ಬಂಧನಕ್ಕೆ‌ ಆಗ್ರಹಿಸಿ ಕಲಬುರಗಿ ಎಸ್​ಪಿ ಕಚೇರಿ ಮುಂಭಾಗ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡುವುದಾಗಿ ಕಾಂಗ್ರೆಸ್ ಎಚ್ಚರಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿ ಮಣಿಕಂಠ ರಾಠೋಡ್​ರನ್ನು ಬಂಧಿಸಿ ಕಲಬುರಗಿಗೆ ಕರೆತಂದಿದೆ.


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ