Breaking News

ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್‌ಗೆ ಅಭಿನಂದನೆ ಸಲ್ಲಿಸಿದ ಸಚಿನ್ ತೆಂಡೂಲ್ಕರ್

Spread the love

ಟಿ20 ವಿಶ್ವಕಪ್‌ನ ಹೊಸ ಚಾಂಪಿಯನ್ ಆಗಿ ಇಂಗ್ಲೆಂಡ್ ತಂಡ ಹೊರಹೊಮ್ಮಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸುವ ಮೂಲಕ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎರಡನೇ ಬಾರಿಗೆ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ.

ಇದಕ್ಕೂ ಮುನ್ನ 2010ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಇಂಗ್ಲೆಂಡ್ ಚಾಂಪಿಯನ್ ಆಗಿತ್ತು.

ಇಂಗ್ಲೆಂಡ್ ತಂಡದ ಈ ಸಾಧನೆಗೆ ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದು ಇದೊಂದು ಅದ್ಭುತ ಸಾಧನೆ ಎಂದು ಕೊಂಡಾಡಿದ್ದಾರೆ. ಇಂಗ್ಲೆಂಡ್ ತಂಡದ ಈ ಸಾಧನೆಗೆ ಸಚಿನ್ ತೆಂಡೂಲ್ಕರ್ ವಿಶೇಷವಾಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

“ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದಿರುವ ಇಂಗ್ಲೆಂಡ್ ತಂಡಕ್ಕೆ ಅಭಿನಂದನೆಗಳು. ಇದೊಂದು ಅದ್ಬುತವಾದ ಸಾಧನೆ. ಇದು ಅತ್ಯಂತ ಪೈಪೋಟಿಯ ಫಯನಲ್ ಪಂದ್ಯವಾಗಿತ್ತು. ಶಾಹೀನ್ ಅಫ್ರಿದಿ ಒಂದು ವೇಳೆ ಗಾಯಗೊಳ್ಳದೆ ಇದ್ದಿದ್ದರೆ ಈ ಪೈಪೋಟಿ ಮತ್ತಷ್ಟು ತೀವ್ರವಾಗಿರುತ್ತಿತ್ತು. ಈ ವಿಶ್ವಕಪ್‌ನಲ್ಲಿ ಎಂಥಾ ಏರಿಳಿತಗಳು” ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಈ ಫೈಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಪಾಕಿಸ್ತಾನದ ಬ್ಯಾಟಿಂಗ್ ವಿಭಾಗದ ಮೇಲೆ ಅದ್ಭುತವಾದ ಯಶಸ್ಸು ಸಾಧಿಸಿದ ಇಂಗ್ಲೆಂಡ್ ಬೌಲಿಂಗ್ ವಿಭಾಗ ಪಾಕಿಸ್ಥಾನ ತಂಡವನ್ನು 137 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ಪಾಕಿಸ್ತಾನದ ನಾಯಕ ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ ಈ ಪಂದ್ಯದಲ್ಲಿ ಮಿಂಚಲು ವಿಫಲವಾದರು.

ಬಳಿಕ ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಕೂಡ ಆರಂಭದಿಂದಲೇ ಸಂಕಷ್ಟವನ್ನು ಎದುರಿಸಿತು. ಪಾಕಿಸ್ತಾನದ ಬೌಲಿಂಗ್ ವಿಭಾಗ ಕೂಡ ಅದ್ಭುತ ಹೋರಾಟವನ್ನು ನೀಡುವಲ್ಲಿ ಯಶಸ್ವಿಯಾಯಿತು. ಆದರೆ ಅಂತಿಮ ಹಂತದಲ್ಲಿ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಿದ್ದು ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಇಂಗ್ಲೆಂಡ್ ತಂಡದ ಯುವ ಆಲ್‌ರೌಂಡರ್ ಸ್ಯಾಮ್ ಕರನ್ ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಪಾಕಿಸ್ತಾನ ಪ್ಲೇಯಿಂಗ್ XI ಹೀಗಿದೆ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

ಬೆಂಚ್: ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

ಇಂಗ್ಲೆಂಡ್ ಪ್ಲೇಯಿಂಗ್ XI : ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್

 


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ