ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನು ಅಪಹರಿಸಿದ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ.
ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು.
ಬಳಿಕ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ್ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಸೋಇಚ್ಛೆ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಗೋಕುಲ ರಸ್ತೆ ಠಾಣೆಯ ಪೊಲೀಸರು ಅಪಹರಣಕ್ಕೊಳಗಾದ ವಿದ್ಯಾರ್ಥಿಯನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಶ್ವಾಪುರ ತಳವಾರ ಓಣಿಯ ಮಹಮ್ಮದ್ ಗೌಸ್, ಶಬರಿನಗರದ ಸೋಹೆಲ್ ಬಂಧಿತರು. ಮತ್ತಿಬ್ಬರು ಆರೋಪಿಗಳಾದ ಪ್ರತೀಕ್ ಮತ್ತು ಸೌರಬ್ ಪರಾರಿಯಾಗಿದ್ದಾರೆ.
Laxmi News 24×7